ADVERTISEMENT

ರಾಯಚೂರು ಜಿಲ್ಲೆಯಲ್ಲಿ 14 ಎಂಎಂ ಮಳೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 16:31 IST
Last Updated 3 ಜೂನ್ 2021, 16:31 IST

ರಾಯಚೂರು: ಜಿಲ್ಲೆಯಾದ್ಯಂತ ಬುಧವಾರ ರಾತ್ರಿ 14 ಮಿಲಿ ಮೀಟರ್‌ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುವಾರ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ಮಳೆಯಾಗಿಲ್ಲ.

ಲಿಂಗಸುಗೂರು ಮತ್ತು ಮಸ್ಕಿ ತಾಲ್ಲೂಕುಗಳಲ್ಲಿ ಅತಿಹೆಚ್ಚು ಮಳೆಯಾಗಿದ್ದು, ಹಳ್ಳಗಳಲ್ಲಿ ನೀರು ಹರಿಯಲಾರಂಭಿಸಿದೆ. ರಾಯಚೂರು ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಬಿರುಗಾಳಿಯಿಂದ ಎರಡು ಗುಡಿಸಲುಗಳ ಟಿನ್‌ಶೆಡ್‌ ಹಾರಿಹೋಗಿದ್ದು, ಯಾವುದೇ ಜೀವಹಾನಿಯಾಗಿಲ್ಲ.

ದೇವದುರ್ಗ ತಾಲ್ಲೂಕಿನಲ್ಲಿ 12, ಲಿಂಗಸುಗೂರು ತಾಲ್ಲೂಕಿನಲ್ಲಿ 32, ಮಾನ್ವಿ ತಾಲ್ಲೂಕಿನಲ್ಲಿ 10, ರಾಯಚೂರು ತಾಲ್ಲೂಕಿನಲ್ಲಿ 11, ಸಿಂಧನೂರು ತಾಲ್ಲೂಕಿನಲ್ಲಿ 4, ಮಸ್ಕಿ ತಾಲ್ಲೂಕಿನಲ್ಲಿ 9 ಹಾಗೂ ಸಿರವಾರ ತಾಲ್ಲೂಕಿನಲ್ಲಿ 20 ಮಿಲಿಮೀಟರ್ ಮಳೆ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.