ADVERTISEMENT

ರಾಯಚೂರು: ಜಿಲ್ಲೆಯಲ್ಲಿ ಮತ್ತೆ 142 ಜನರಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 14:09 IST
Last Updated 4 ಆಗಸ್ಟ್ 2020, 14:09 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ರಾಯಚೂರು:ಜಿಲ್ಲೆಯಲ್ಲಿ ಮತ್ತೆ 142 ಜನರಿಗೆ ಕೋವಿಡ್‌ ದೃಢವಾಗಿದೆ. ಇದೇ ವೇಳೆ, ಕೋವಿಡ್‌ನಿಂದ ಗುಣಮುಖರಾಗಿದ್ದ 116 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯ 939 ಸಕ್ರಿಯ ಪ್ರಕರಣಗಳಿವೆ.

ಇದುವರೆಗೂ ಒಟ್ಟು 2,850 ಸೋಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ ಗುಣರಾದವರು ಒಟ್ಟು 1,881 ಜನರು. ಕೋವಿಡ್‌ನಿಂದ ಮತ್ತೆ ಇಬ್ಬರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 30 ಕ್ಕೆ ಏರಿಕೆಯಾಗಿದೆ.

ಗಂಭೀರ ಸ್ಥಿತಿಯಲ್ಲಿದ್ದ ಐದು ಜನರನ್ನು ಒಪೆಕ್‌ಗೆ ದಾಖಲಿಸಲಾಗಿದ್ದು, ಒಟ್ಟು 129 ಜನರು ಆಸ್ಪತ್ರೆಯಲ್ಲಿದ್ದಾರೆ. ಒಟ್ಟು 349 ಮಾದರಿಗಳ ವರದಿ ಬರಬೇಕಿದೆ. ಇದುವರೆಗೂ ಒಟ್ಟು 41,655 ಜನರಿಂದ ಗಂಟಲು ದ್ರವ ಸಂಗ್ರಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.