ADVERTISEMENT

21ರವರೆಗೂ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 14:41 IST
Last Updated 19 ಡಿಸೆಂಬರ್ 2019, 14:41 IST

ರಾಯಚೂರು: ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿ ಜಾರಿಗೆ ತಂದಿರುವುದನ್ನು ವಿರೋಧಿಸಿ ಹಾಗೂ ನಾಗರಿಕ ರಾಷ್ಟ್ರೀಯ ನೋಂದಣಿ ಜಾರಿ ಮಾಡಿದ್ದನ್ನು ವಿರೋಧಿಸಿ ಕೆಲವು ಸಂಘ-ಸಂಸ್ಥೆಗಳು ಬಂದ್ ಪ್ರತಿಭಟನೆಗೆ ರಾಷ್ಟ್ರೀಯ ಕರೆ ನೀಡಿದ್ದರಿಂದ ಜಿಲ್ಲೆಯಾದ್ಯಂತ ಡಿಸೆಂಬರ್‌ 21ರ ರಾತ್ರಿ 12 ಗಂಟೆಯವರೆಗೆ ಆರ್‌.ವೆಂಕಟೇಶಕುಮಾರ್‌ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಚೋದನಾಕಾರಿ ಭಾಷಣ ಮಾಡಬಾರದು. ಬಂದೂಕು, ಭರ್ಚಿ, ಕತ್ತಿ, ಚಾಕು, ಕುಡುಗೋಲು, ಕೊಡಲಿ, ಬಡಿಗೆ ಸೇರಿದಂತೆ ಯಾವುದೇ ಮಾರಕಾಸ್ತ್ರ ಮತ್ತು ಸ್ಫೋಟಕ ವಸ್ತುಗಳನ್ನು ಜೊತೆಗೆ ಕೊಂಡೊಯ್ಯವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT