ADVERTISEMENT

ಇಂದು ಸಂಜೆಯಿಂದ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 19:59 IST
Last Updated 19 ಏಪ್ರಿಲ್ 2019, 19:59 IST
   

ರಾಯಚೂರು: ಲೋಕಸಭಾ ಚುನಾವಣೆಗೆ 23ರಂದು ಮತದಾನ ಸುಗಮವಾಗಿ ಜರುಗಿಸುವ ಪ್ರಯುಕ್ತ ಜಿಲ್ಲಾ ವ್ಯಾಪ್ತಿಯಲ್ಲಿ ಏಪ್ರಿಲ್ 21ರ ಸಂಜೆ 6ಗಂಟೆಯಿಂದ 23ರ ಸಂಜೆ 6ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಐದು ಅಥವಾ ಐದಕ್ಕಿಂತ ಹೆಚ್ಚಿನ ಜನರು ಗುಂಪು ಗೂಡುವುದು, ಮೆರವಣಿಗೆ, ಸಭೆ, ಸಮಾರಂಭ ನಡೆಸುವುದು ನಿಷೇಧಿಸಲಾಗಿದೆ. ಯಾವುದೇ ಮಾರಕಾಸ್ತ್ರ ಮತ್ತು ಸ್ಪೋಟಕ ವಸ್ತುಗಳನ್ನು ಜೊತೆಗೆ ಕೊಂಡೊಯ್ಯಬಾರದು. ಜೀವಂತ ಅಥವಾ ಮೃತ ವ್ಯಕ್ತಿಯ ಭಾವಚಿತ್ರ ಹಾಗೂ ಪ್ರತಿರೂಪವನ್ನು ಪ್ರದರ್ಶಿಸುವ ಕಾರ್ಯವನ್ನು ಮಾಡಬಾರದು. ಶವಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಆನ್ವಯಿಸುವದಿಲ್ಲ.

ADVERTISEMENT

ಮನೆ ಮನೆ ಭೇಟಿ ನೀಡಲು 10 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.