ರಾಯಚೂರು: ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ.
ರಾಯಚೂರು, ಶಕ್ತಿನಗರ, ದೇವದುರ್ಗ, ಲಿಂಗಸುಗೂರು, ಹಟ್ಟಿಚಿನ್ನದಗಣಿ ಪ್ರದೇಶದಲ್ಲಿ ಬೆಳಿಗ್ಗೆ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬರಲು ವಿಳಂಬವಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪ್ರವಾಸ ರದ್ದುಗೊಳಿಸಲಾಗಿದೆ. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ರಸ್ತೆ ಮಾರ್ಗವಾಗಿ ರಾಯಚೂರಿಗೆ ಬರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.