
ಪ್ರಜಾವಾಣಿ ವಾರ್ತೆ
ರಾಯಚೂರು: ‘ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
‘ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡು, ಫೆಬ್ರುವರಿಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು’ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು’ ಎಂದರು.
‘ನೇಮಕಾತಿಯಾದ 750 ಸರ್ವೆಯರ್‌ಗಳಿಗೆ ತರಬೇತಿ ಕೊಡಲಾಗಿದೆ. ಅವರೂ ಕಾರ್ಯಾರಂಭ ಮಾಡಲಿದ್ದಾರೆ. ಇದರಿಂದ ಕಂದಾಯ ಜಮೀನುಗಳ ಸಮೀಕ್ಷೆ ಕಾರ್ಯ ಸುಲಭವಾಗಲಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.