ADVERTISEMENT

ರಾಯಚೂರು | ಜಿರಳೆ ಬಿದ್ದ ಹಾಲು ಕುಡಿದ 20 ವಿದ್ಯಾರ್ಥಿಗಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2023, 14:32 IST
Last Updated 26 ಆಗಸ್ಟ್ 2023, 14:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಯಚೂರು: ತಾಲ್ಲೂಕಿನ ತಲಮಾರಿ ಗ್ರಾಮದಲ್ಲಿ ಶುಕ್ರವಾರ ಜಿರಳೆ ಬಿದ್ದ ಹಾಲು ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಶಾಲೆಯಲ್ಲಿ ಎಂದಿನಂತೆ ಹಾಲು ಕುಡಿದಿದ್ದ ವಿದ್ಯಾರ್ಥಿಗಳಲ್ಲಿ ಕೆಲವರು ವಾಂತಿ ಮಾಡಿಕೊಂಡಿದ್ದರು. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಇಡಪನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟು ಚಿಕಿತ್ಸೆ ನೀಡಲಾಯಿತು. ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಯ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು. ಪಾತ್ರೆ ಪರಿಶೀಲಿಸಿದಾಗ ಹಾಲಿನಲ್ಲಿ ಜಿರಳೆ ಬಿದ್ದಿರುವುದು ಪತ್ತೆಯಾಗಿದೆ.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ಅವರು ಪಿಎಚ್‍ಸಿ ಹಾಗೂ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳಿಗೆ ಹಾಲು ಹಾಗೂ ಉಪಾಹಾರ ಕೊಡುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.