ADVERTISEMENT

ಮಸ್ಕಿ: 23 ಜನಕ್ಕೆ ಕೋವಿಡ್‌ ದೃಢ

ಪ್ರತಿದಿನ 100 ಜನರ ಗಂಟಲು ದ್ರವ ಮಾದರಿ ಸಂಗ್ರಹ: ಡಾ.ಮೌನೇಶ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 11:07 IST
Last Updated 25 ಏಪ್ರಿಲ್ 2021, 11:07 IST
ಮಸ್ಕಿ ಪಟ್ಟಣದಲ್ಲಿ ಭಾನುವಾರ ವಾರಾಂತ್ಯ ಕರ್ಫ್ಯೂ ಕಾರಣ ಪೊಲೀಸರು ಅಂಗಡಿಗಳು ತೆರೆಯದಂತೆ ನೋಡಿಕೊಂಡರು
ಮಸ್ಕಿ ಪಟ್ಟಣದಲ್ಲಿ ಭಾನುವಾರ ವಾರಾಂತ್ಯ ಕರ್ಫ್ಯೂ ಕಾರಣ ಪೊಲೀಸರು ಅಂಗಡಿಗಳು ತೆರೆಯದಂತೆ ನೋಡಿಕೊಂಡರು   

ಮಸ್ಕಿ: ಪಟ್ಟಣದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಜನ ಆತಂಕಗೊಂಡಿದ್ದಾರೆ.

ಪಟ್ಟಣದಲ್ಲಿಭಾನುವಾರ 23 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.

ಎರಡು ದಿನಗಳಲ್ಲಿ ಸೋಂಕಿತರ ಸಂಖ್ಯೆ 40 ರ ಗಡಿ ದಾಟಿದೆ. ಕೊರೊನಾ ಸೋಂಕಿನಿಂದ ಪಟ್ಟಣದ ವ್ಯಕ್ತಿಯೊಬ್ಬರು ಬಳ್ಳಾರಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ADVERTISEMENT

‘ಕೊರೊನಾ ಸೋಂಕಿತರನ್ನು ಹೋಂ ಐಸೋಲೇಷನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮನೆಗಳಿಗೆ ಪುರಸಭೆ ವತಿಯಿಂದ ಸಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ’ ಎಂದು ಡಾ.ಮೌನೇಶ ತಿಳಿಸಿದ್ದಾರೆ.

‘ಪಟ್ಟಣದಲ್ಲಿ ಸೋಂಕಿತರ ಪತ್ತೆ ಕಾರ್ಯ ನಡೆದಿದೆ. ಪ್ರತಿದಿನ 70 ರಿಂದ 100 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳಿಸಿಕೊಡಲಾಗುತ್ತಿದೆ. ಇನ್ನು ಮುಂದೆ ಪ್ರತಿದಿನ 200 ಜನರನ್ನು ಪರೀಕ್ಷೆಗೊಳಪಡಿಸುವ ಗುರಿ ಹೊಂದಲಾಗಿದೆ’ ಎಂದು ಡಾ. ಮೌನೇಶ ತಿಳಿಸಿದ್ದಾರೆ.

‘ಕೊರೊನಾ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ. ಸಾರ್ವಜನಿಕರು ಮನೆಬಿಟ್ಟು ಹೊರ ಬರಬಾರದು’ ಎಂದು ಸಬ್‌ ಇನ್‌ಸ್ಪೆಕ್ಟರ್‌ ಸಿದ್ದರಾಮಪ್ಪ ಮನವಿ ಮಾಡಿದ್ದಾರೆ.

‘ನಿಯಮ ಉಲ್ಲಂಘಿಸಿ ಹೊರ ಬಂದರೆ ಅಂತವರ ಬೈಕ್ ಜಪ್ತಿ ಮಾಡುವ ಮೂಲಕ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಇದ್ದ ಕಾರಣ ಸಂತೆ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ತೆರೆಯದಂತೆ ಪುರಸಭೆ ಸಿಬ್ಬಂದಿ ನೋಡಿಕೊಂಡರು. ತೆರೆದಿದ್ದ ಕೆಲವೊಂದು ಅಂಗಡಿಗಳನ್ನು ಬಂದ್ ಮಾಡಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.