ADVERTISEMENT

30ಕ್ಕೆ ಜಿಲ್ಲಾ ಮಟ್ಟದ ಆರನೇ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 8:36 IST
Last Updated 26 ಮಾರ್ಚ್ 2018, 8:36 IST

ರಾಯಚೂರು: ಅಂಗನವಾಡಿ ಕಾರ್ಯ ಕರ್ತೆಯರ ಹಾಗೂ ಸಹಾಯಕಿಯರ ಸಂಘದಿಂದ (ಎಐಟಿಯುಸಿ ಸಂಯೋ ಜಿತ) ಜಿಲ್ಲಾಮಟ್ಟದ ಆರನೇ ಸಮ್ಮೇಳನ ವನ್ನು ಮಾ. 30ರಂದು ಮಧ್ಯಾಹ್ನ 12ಗಂಟೆಗೆ ಮಾನ್ವಿ ಪಟ್ಟಣ ಟಿಎಪಿಎಂಸಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಡಿ.ಎಚ್.ಕಂಬಳಿ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಅವರು ಸಮ್ಮೇಳನ ಉದ್ಘಾಟಿಸಲಿದ್ದು ದಾವಣಗೆರೆ ಅಂಗನವಾಡಿ ಫೆಡರೇಷನ್ ಅಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಎನ್‌.ಎಸ್.ಬೋಸರಾಜು ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶಾಸಕ ಹಂಪಯ್ಯ ನಾಯಕ, ಅಂಗನವಾಡಿ ಫೆಡರೇಷನ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ವಿ.ವಿಜಯಲಕ್ಷ್ಮಿ, ವಿಜಯಭಾಸ್ಕರ, ಎನ್.ಶಿವಣ್ಣ, ಎ.ಜ್ಯೋತಿ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಸಮ್ಮೇಳನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿ ಯರ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸಂಗಯ್ಯ ಸ್ವಾಮಿ ಹಾಗೂ ಕಾಳಮ್ಮ ಮಾತನಾಡಿದರು. ಸಿದ್ದರಾಮಯ್ಯ ಸ್ವಾಮಿ, ಶ್ರೀಶೈಲರೆಡ್ಡಿ, ಲಲಿತಾಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.