ಲಿಂಗಸುಗೂರು: ಸಮೀಪದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಮಂಗಳವಾರ 30,075 ಕ್ಯುಸೆಕ್ ನೀರು ಹರಿಸಲಾಯಿತು.
ಅಣೆಕಟ್ಟಿನ ಮೇಲ್ಭಾಗದ ಹಾಗೂ ಮಲಪ್ರಭಾ ನದಿ ಜಲಾನಯನ ಪ್ರದೇಶದಲ್ಲಿ ಮಳೆ ಬೀಳು ತ್ತಿರುವುದು ಹಾಗೂ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಸೇರಿ ಒಟ್ಟು 30 ಸಾವಿರ ಕ್ಯುಸೆಕ್ ನೀರು ಬಸವಸಾಗರ ಜಲಾಶಯಕ್ಕೆ ಹರಿದು ಬರುತ್ತಿದೆ.
ಆದ ಕಾರಣ ಜಲಾಶಯದ 9 ಕ್ರಸ್ಟ್ ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ. ಜಲಾಶಯದಲ್ಲಿ ಪ್ರಸ್ತುತ 25.84 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.