ಲಿಂಗಸುಗೂರು: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಬುಧವಾರ 51,475 ಕ್ಯುಸೆಕ್ ನೀರು ಹರಿಸಲಾಗಿದ್ದು, ತಾಲ್ಲೂಕಿನ ನದಿ ತೀರದ ಗ್ರಾಮಗಳ ಜನರಿಗೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.
ಶೀಲಹಳ್ಳಿ, ಜಲದುರ್ಗ, ಹಂಚಿನಾಳ, ಯರಗೋಡಿ, ಯಳಗುಂದಿ, ಕಡದರಗಡ್ಡಿ ಗ್ರಾಮಗಳಿಗೆ ಅಧಿಕಾರಿಗಳು ಬುಧವಾರ ಭೇಟಿ ನೀಡಿ,‘ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿಗೆ ಇಳಿಯಬಾರದು. ನದಿ ಬಳಿ ಜಾನುವಾರು ಬಿಡ ಬಾರದು’ ಎಂದು ಜಾಗೃತಿ ಮೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.