ರಾಯಚೂರು: ನಗರದ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಮೂರನೇ ದಿನವೂ ದಾಖಲೆಗಳನ್ನು ಹೊಂದಿರದ ಆಟೊರಿಕ್ಷಾಗಳ ಪರಿಶೀಲನೆ ನಡೆಸಿದರು.
ಗುರುವಾರ 53 ಆಟೊಗಳನ್ನು ಪತ್ತೆ ಮಾಡಿ ಚಾಲಕರು ಹಾಗೂ ಮಾಲೀಕರಿಗೆ ₹ 53 ಸಾವಿರ ದಂಡ ವಿಧಿಸಿದ್ದಾರೆ.
ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ, ಸ್ಟೇಷನ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್ಯಾಚರಣೆ ನಡೆಸಿ ಲೈಸನ್ಸ್ ಹಾಗೂ ಪರ್ಮಿಟ್ ಇಲ್ಲದೇ ಆಟೊ ಓಡಿಸುತ್ತಿರುವ ಆಟೊಗಳನ್ನು ಪತ್ತೆ ಮಾಡಿ ಚಾಲಕರಿಗೆ ಎಚ್ಚರಿಕೆ ನೀಡಿದರು.
‘ರಾಯಚೂರಲ್ಲಿ ಮೂರು ದಿನಗಳಲ್ಲಿ ಸರಿಯಾದ ದಾಖಲೆಗಳನ್ನು ಹೊಂದಿರದ 153 ಆಟೊಗಳನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆ ಮುಂದುವರಿಯಲಿದೆ‘ ಎಂದು ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಸಣ್ಣ ಈರೇಶ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.