ADVERTISEMENT

ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 5:55 IST
Last Updated 7 ಜನವರಿ 2018, 5:55 IST

ಮಾನ್ವಿ: ಮಂಗಳೂರಿನ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲ ಈಚೆಗೆ ಬಿಜೆಪಿ ಕಾರ್ಯಕರ್ತ ದೀಪಕ್‌ ರಾವ್‌ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ದೀಪಕ್‌ ರಾವ್‌ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು. ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಯುವಕರ ಹತ್ಯೆಗೆ ಕಾರಣವಾಗಿರುವ ಪಿಎಫ್‌ಐ, ಕೆಎಫ್‌ಡಿ ಸಂಘಟನೆಗಳನ್ನು ನಿಷೇಧಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು ಗೃಹ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಅಮರೇಶ ಬಿರಾದಾರ ಅವರಿಗೆ ಸಲ್ಲಿಸಲಾಯಿತು.

ಮಾಜಿ ಶಾಸಕ ಗಂಗಾಧರ ನಾಯಕ, ಬಿಜೆಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನಾಗರತ್ನ ಕುಪ್ಪಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪಗೌಡ ನಕ್ಕುಂದಿ, ಮಲ್ಲನಗೌಡ ನಕ್ಕುಂದಿ, ರಾಮನಗೌಡ ಗವಿಗಟ್‌, ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ವೀರೇಶ ನಾಯಕ ಬೆಟ್ಟದೂರು, ಮ್ಯಾಕಲ್‌ ಅಯ್ಯಪ್ಪ ನಾಯಕ, ಶರಣಯ್ಯ ಗುಡದಿನ್ನಿ,ಪಿ.ಗಿರಿ ನಾಯಕ, ನಾಗರಾಜ ಕಬ್ಬೇರ್‌, ಈರಣ್ಣ ನಾಯಕ ಸಂಗಾಪುರ, , ವೆಂಕಟೇಶ ನಾಯಕ, ಗುರುಸಿದ್ದಪ್ಪ, ಅಂಜಿ ನಾಯಕ,

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.