ADVERTISEMENT

ಸರ್ಕಾರಿ ಸೌಲಭ್ಯ ಸದ್ಬಳಕೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 5:05 IST
Last Updated 10 ಜನವರಿ 2018, 5:05 IST

ಮಾನ್ವಿ: ‘ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ವ್ಯಾಸಂಗದಲ್ಲಿ ಉತ್ತಮ ಸಾಧನೆ ಮಾಡಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜು ಹೇಳಿದರು.

ಸೋಮವಾರ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗಾಗಿ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್‌ ವಿತರಣೆ, ಬಸ್ ಪಾಸ್ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಬಡ ವಿದ್ಯಾರ್ಥಿಗಳಿಗಾಗಿ ವಿದ್ಯಾಸಿರಿ ಮತ್ತಿತರ ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಶಿಕ್ಷಣದಲ್ಲಿ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿ, ‘ಕಾಲೇಜಿನ ಅಭಿವೃದ್ಧಿಗಾಗಿ ₹1.70 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ’ ಎಂದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್‌ ಇಲಿಯಾಸ್ ಖಾದ್ರಿ, ಜಿಲ್ಲಾ ಪಂಚಾಯತಿ ಸದಸ್ಯ ಕಿರಿಲಿಂಗಪ್ಪ, ಕಾಲೇಜಿನ ಪಂಶುಪಾಲ ಯಂಕಣ್ಣ, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾದ ಪಿ.ತಿಪ್ಪಣ್ಣ ಬಾಗಲವಾಡ ವಕೀಲ, ಈರಮ್ಮ, ಫಕೀರಪ್ಪ ಓಲೇಕಾರ ಹಾಗೂ ಉಪನ್ಯಾಸಕರು ಇದ್ದರು. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 49 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.