ADVERTISEMENT

ಹಟ್ಟಿ ಚಿನ್ನದ ಗಣಿ: ಜೂಜಾಟದಲ್ಲಿ ತೊಡಗಿದ್ದ 7 ಜನರ ಬಂಧನ

​ಪ್ರಜಾವಾಣಿ ವಾರ್ತೆ
Published 20 ಮೇ 2025, 16:08 IST
Last Updated 20 ಮೇ 2025, 16:08 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಹಟ್ಟಿ ಚಿನ್ನದ ಗಣಿ: ಸಮೀಪದ ಕೋಠಾ ಗ್ರಾಮದ ಮುಖ್ಯ ರಸ್ತೆಯ ನೀರಿನ ಟ್ಯಾಂಕ್‌ನ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ 7 ಜನರನ್ನು ಹಟ್ಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋಠಾ ಗ್ರಾಮದ ಮೈಹಿಬೂಬು, ಮುಸ್ತಾಫಾ, ಮನ್ಸೂರ, ಪ್ರಶಾಂತ, ರಂಗನಾಥ, ಉಮೇಶ, ರಾಜು ಬಂಧಿತರು. ಅವರಿಂದ ₹3,500 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪಿಐ ಹೊಸಕೇರಪ್ಪ ತಿಳಿಸಿದ್ದಾರೆ.

ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.