ADVERTISEMENT

ರಾಯಚೂರು ವರ್ತುಲ ರಸ್ತೆ ನಿರ್ಮಾಣಕ್ಕೆ ₹ 80 ಕೋಟಿ: ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 4:45 IST
Last Updated 15 ಆಗಸ್ಟ್ 2021, 4:45 IST
ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡುತ್ತಿರುವ ಸಚಿವ ವಿ ಸೋಮಣ್ಣ
ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡುತ್ತಿರುವ ಸಚಿವ ವಿ ಸೋಮಣ್ಣ    

ರಾಯಚೂರು: ರಾಯಚೂರು ‌ನಗರಕ್ಕೆ ವರ್ತುಲ ರಸ್ತೆ ನಿರ್ಮಾಣಕ್ಕೆ ಬಜೆಟ್ ಮೂಲಕ‌ ರಾಜ್ಯ ಸರ್ಕಾರ ₹80 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಗೆ ಕಳೆದ ‌ನಾಲ್ಕು ವರ್ಷಗಳಲ್ಲಿ ₹114 ಕೋಟಿ ಬಿಡುಗಡೆಯಾಗಿದ್ದು, ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.

ADVERTISEMENT

ವಸತಿ ಇಲಾಖೆಯಲ್ಲೂ ಕಳೆದ ಎರಡು ವರ್ಷಗಳಲ್ಲಿ ಅಭೂತ ಸಾಧನೆಯಾಗಿದೆ. 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ ಮಾಲೀಕತ್ವ ನೀಡಲಾಗುತ್ತಿದೆ. 9.74 ಲಕ್ಷ ಮನೆಗಳ‌ ನಿರ್ಮಾಣಕ್ ₹10,194 ಕೋಟಿ ಅನುದಾನ ಮೀಸಲಿಡಲಾಗಿದೆ. ಆಶ್ರಯ ಬಡಾವಣೆಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ₹500 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.