ಸಿರವಾರದಲ್ಲಿ ಗುರುವಾರ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬ್ರಿಜೇಶ ಪಾಟೀಲ ಅವರಿಗೆ ಸಚಿವ ಎನ್.ಎಸ್.ಭೋಸರಾಜು ಅವರು ಆದೇಶ ಪತ್ರ ನೀಡಿದರು
ಸಿರವಾರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ರಾಯಚೂರು ಜಿಲ್ಲೆಗೆ ₹802 ಕೋಟಿ ಮಂಜೂರು ಮಾಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಹೇಳಿದರು.
ಪಟ್ಟಣದಲ್ಲಿ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬ್ರಿಜೇಶ ಪಾಟೀಲ ಅವರಿಗೆ ಗುರುವಾರ ಆದೇಶ ಪತ್ರ ನೀಡಿ ಮಾತನಾಡಿದರು.
ರಾಜ್ಯ ಸರ್ಕಾರ ಐದು ಯೋಜನೆಗಳಿಗೆ ₹39 ಸಾವಿರ ಕೋಟಿ ಅನುದಾನ ಮೀಸಲಿಟ್ಟು ಎಲ್ಲರಿಗೂ ಆರ್ಥಿಕ ಸಭಲೀಕರಣ ಮಾಡಿಕೊಟ್ಟಿದೆ ಎಂದರು.
ಸಮಿತಿಯ ಪದಾಧಿಕಾರಿಗಳು ಪಂಚ ಗ್ಯಾರಂಟಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ ಎಲ್ಲಾ ಯೋಜನೆಗಳನ್ನು ಮನೆ ಮನೆ ತಲುಪಿಸಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ನಂತರ ಶಾಸಕ ಜಿ.ಹಂಪಯ್ಯ ನಾಯಕ, ಪಂಚ ಗ್ಯಾರಂಟಿ ಅನುಷ್ಠಾನ ತಾಲ್ಲೂಕು ಅಧ್ಯಕ್ಷ ಬ್ರಿಜೇಶ ಪಾಟೀಲ, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೆ.ಶಾಂತಪ್ಪ, ಜಯಣ್ಣ, ರುದ್ರಪ್ಪ ಅಂಗಡಿ, ಶರಣಪ್ಪ ನಾಯಕ ಗುಡದಿನ್ನಿ, ಕಿರಲಿಂಗಪ್ಪ, ಬಸವರಾಜ ಪಾಟೀಲ ಅತ್ತನೂರು, ದಾನನಗೌಡ, ಚಂದ್ರ ಕಳಸ, ಶಿವಶರಣ ಅರಕೇರಿ, ರಮೇಶ ದರ್ಶನಕರ್, ರೇಣುಕಾ, ನಿರ್ಮಲಾ ಬೆಣ್ಣೆ, ಭಾಗ್ಯಮ್ಮ ಕಲ್ಲಂಗೇರಿ, ಬಗರ ಹುಕಂ ಸದಸ್ಯ ರಂಗನಾಥ ನಾಯಕ, ಬೀರಪ್ಪ ಬಲ್ಲಟಿಗಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.