ADVERTISEMENT

9 (ಎ) ಕಾಲುವೆ ಕಾಮಗಾರಿ ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 12:51 IST
Last Updated 4 ಜುಲೈ 2021, 12:51 IST
ಕವಿತಾಳ ಸಮೀಪದ 9 (ಎ) ಕಾಲುವೆ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾ ವೆಂಕಟಪ್ಪ ನಾಯಕ ಶನಿವಾರ ಭೇಟಿ ನೀಡಿ, ಪರಿಶೀಲಿಸಿದರು
ಕವಿತಾಳ ಸಮೀಪದ 9 (ಎ) ಕಾಲುವೆ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾ ವೆಂಕಟಪ್ಪ ನಾಯಕ ಶನಿವಾರ ಭೇಟಿ ನೀಡಿ, ಪರಿಶೀಲಿಸಿದರು   

ಕವಿತಾಳ: ನಾರಾಯಣಪುರ ಬಲದಂಡೆ 9 (ಎ) ವಿತರಣಾ ಕಾಲುವೆ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾವೆಂಕಟಪ್ಪ ನಾಯಕ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕಳೆದ 13 ವರ್ಷಗಳಿಂದ ಕಾಮಗಾರಿ ನನೆಗುದಿಗೆ ಬಿದ್ದಿದ್ದು ಕಾಮಗಾರಿ ಪುನರ್ ಆರಂಭಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು. ಕಾಲುವೆ ನಿರ್ಮಾಣಕ್ಕೆ ಅಗತ್ಯ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಅರಣ್ಯ ಇಲಾಖೆ ವ್ಯಾಪ್ತಿಯ ಭೂಮಿಯಲ್ಲಿ ನಾಲೆ ಹಾಯ್ದು ಹೋಗುವ ಕುರಿತು ಇಲಾಖೆ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ ಕಾರಣ ಅರಣ್ಯ ಇಲಾಖೆಗೆ ಪರ್ಯಾಯ ಭೂಮಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ ಶೀಘ್ರ ಕಾಮಗಾರಿ ಆರಂಭಕ್ಕೆ ಮುಂದಾಗಬೇಕು’ ಎಂದು ಹೇಳಿದರು.

ADVERTISEMENT

ತಹಶೀಲ್ದಾರ್ ವಿಜಯೇಂದ್ರ ಹುಲಿ ನಾಯಕ, ಕೃಷ್ಣ ಭಾಗ್ಯ ಜಲ ನಿಗಮದ ಎಂಜಿನಿಯರ್ ಮನೋಹರ, ವಲಯ ಅರಣ್ಯ ಅಧಿಕಾರಿ ರಾಜೇಶ, ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ್‍, ಅಮರೇಶ ಚಾಗಭಾವಿ, ಶಿವರಾಜ, ವೆಂಕಟೇಶ, ರವಿ ಕುಮಾರ, ಚಂದ್ರಶೇಖರ, ವೆಂಕೋಬ, ದುರುಗಪ್ಪ, ಕೆಂಚಪ್ಪ, ರಾಮಣ್ಣ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.