ADVERTISEMENT

ರಾಯಚೂರಿಗೆ ತಲುಪಿದ 9ಸಾವಿರ ಕೋವಿಶಿಲ್ಡ್ ಲಸಿಕೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2021, 16:05 IST
Last Updated 14 ಜನವರಿ 2021, 16:05 IST
ರಾಯಚೂರಿಗೆ ಗುರುವಾರ ಸಂಜೆ ತಲುಪಿದ ಕೋವಿಶಿಲ್ಡ್ ಲಸಿಕೆಯನ್ನು ಹೊತ್ತ ವಾಹನಕ್ಕೆ ಆರತಿ ಬೆಳಗಿ ಜಿಲ್ಲಾ ಆರೋಗ್ಯ ಕಚೇರಿ ಎದುರು ಬರಮಾಡಿಕೊಳ್ಳಲಾಯಿತು
ರಾಯಚೂರಿಗೆ ಗುರುವಾರ ಸಂಜೆ ತಲುಪಿದ ಕೋವಿಶಿಲ್ಡ್ ಲಸಿಕೆಯನ್ನು ಹೊತ್ತ ವಾಹನಕ್ಕೆ ಆರತಿ ಬೆಳಗಿ ಜಿಲ್ಲಾ ಆರೋಗ್ಯ ಕಚೇರಿ ಎದುರು ಬರಮಾಡಿಕೊಳ್ಳಲಾಯಿತು   

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಮೊದಲ ಸುತ್ತಿನ ಲಸಿಕಾ ಕಾರ್ಯಕ್ರಮ ಜನವರಿ 16 ರಿಂದ ಆರಂಭವಾಗಲಿದ್ದು, ಗುರುವಾರ ಸಂಜೆ 9 ಸಾವಿರ ಕೋವಿಶಿಲ್ಡ್ ಲಸಿಕೆಗಳು ಸುರಕ್ಷತೆಯೊಂದಿಗೆ ರಾಯಚೂರಿಗೆ ವಾಹನದಲ್ಲಿ ತಲುಪಿವೆ.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಗೆ ಆಗಮಿಸಿದ ಲಸಿಕಾ ವಾಹನವನ್ನು ಆರತಿ ಬೆಳಗಿ ಬರಮಾಡಿಕೊಳ್ಳಲಾಯಿತು. ಸಾಂಕೇತಿಕವಾಗಿ ಕೋವಿಡ್ ಲಸಿಕಾ ಬಾಕ್ಸವೊಂದನ್ನು ಅಧಿಕಾರಿಗಳು ಸ್ವೀಕರಿಸಿ ಬಳಿಕ ಕಚೇರಿಯಲ್ಲಿರುವ ಶೀಥಿಲೀಕರಣ ಘಟಕದಲ್ಲಿ ಸಂಗ್ರಹಿಸಿಟ್ಟರು.

ಆನಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ಮಾತನಾಡಿ,ಜಿಲ್ಲೆಗೆ 9 ಸಾವಿರ ಕೋವಿಶಿಲ್ಡ್ ಲಸಿಕೆ ಬಂದಿದ್ದು, ಅವುಗಳನ್ನು ಸುರಕ್ಷಿತವಾಗಿ ಶಿಥಲೀಕರಣ ಘಟಕದಲ್ಲಿ ಸಂಗ್ರಹಿಸಿಡಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ ಸೇವಾ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಲಸಿಕೆ ನೀಡುವ ಕೇಂದ್ರಗಳಲ್ಲಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಮೊದಲ ಸುತ್ತಿನಲ್ಲಿ 600 ಆರೋಗ್ಯ ಸೇವಾ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ಹಾಕಲು ತೀರ್ಮಾನಿಸಲಾಗಿದೆ ಎದು ವಿವರಿಸಿದರು.

16ರಂದು ಬೆಳಿಗ್ಗೆ 11ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆನ್‍ಲೈನ್ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ರಿಮ್ಸ್ ಸೇರಿದಂತೆ ತಾಲ್ಕುಲೂ ಸಾರ್ವಜನಿಕ ಆಸ್ಪತ್ರೆಗಳು, ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಸೇರಿದಂತೆ71 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ನೋಂದಾಯಿಸಲಾಗಿರುವ ಆರೋಗ್ಯ ಸೇವಾ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇತರ ಇಲಾಖೆಗಳ ಅಧಿಕಾರಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.