ರಾಯಚೂರು: ಇಲ್ಲಿಯ ರಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದ ಬಾಣಂತಿ ಹಾಗೂ ನವಜಾತ ಶಿಶು ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ದೇವದುರ್ಗ ತಾಲ್ಲೂಕಿನ ಮಸೀದಾಪುರ ಗ್ರಾಮದ ಶಿವಲಿಂಗಮ್ಮ (21) ಮೃತ ಬಾಣಂತಿ.
‘ಡಿ.27ರಂದು ಶಿವಲಿಂಗಮ್ಮ ಅವರಿಗೆ ಶಸ್ತ್ರಚಿಕಿತ್ಸೆ ಮೂಲಕ ರಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಹೆರಿಗೆ ಬಳಿಕ ರಕ್ತದೊತ್ತಡ ಹೆಚ್ಚಾಗಿದ್ದರಿಂದ ನಾಲ್ಕು ದಿನಗಳ ಕಾಲ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಬುಧವಾರ ಬೆಳಗಿನ ಜಾವ ಮಗು, ನಂತರ ತಾಯಿಯೂ ಮೃತಪಟ್ಟಿದ್ದಾರೆ’ ಎಂದು ರಿಮ್ಸ್‌ನ ವೈದ್ಯಕೀಯ ಅಧೀಕ್ಷಕ ಡಾ.ಭಾಸ್ಕರ್ ತಿಳಿಸಿದ್ದಾರೆ.
‘ವೈದ್ಯರ ನಿರ್ಲಕ್ಷ್ಯದಿಂದಲೇ ಶಿವಲಿಂಗಮ್ಮ ಮೃತಪಟ್ಟಿದ್ದಾಳೆ’ ಎಂದು ಮಹಿಳೆಯ ಸಂಬಂಧಿ ಶಾಂತಕುಮಾರ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.