ADVERTISEMENT

ಶಕ್ತಿನಗರ | ಚಲಿಸುತ್ತಿದ್ದ ಕಾರಿಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 4 ಮೇ 2024, 15:39 IST
Last Updated 4 ಮೇ 2024, 15:39 IST
ಶಕ್ತಿನಗರ ಬಳಿಯ ವೈಟಿಪಿಎಸ್ ಮುಖ್ಯದ್ವಾರದ ಎದುರಿನ ರಸ್ತೆಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು
ಶಕ್ತಿನಗರ ಬಳಿಯ ವೈಟಿಪಿಎಸ್ ಮುಖ್ಯದ್ವಾರದ ಎದುರಿನ ರಸ್ತೆಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು   

ಶಕ್ತಿನಗರ: ವೈಟಿಪಿಎಸ್ ಮುಖ್ಯದ್ವಾರದ ಎದುರಿನ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋಗಿದೆ.

ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಕಾರಿನಲ್ಲಿದ್ದವರು ಕೆಳಗೆ ಇಳಿದಿದ್ದಾರೆ. ನಂತರ ಕಾರು ಹೊತ್ತಿ ಉರಿದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.