ADVERTISEMENT

ಭ್ರಷ್ಟಾಚಾರ ನಿಗ್ರಹ ದಳದಿಂದ ಅರಿವು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 2:19 IST
Last Updated 13 ಫೆಬ್ರುವರಿ 2021, 2:19 IST
ಶಕ್ತಿನಗರ ಬಳಿಯ ದೇವಸೂಗೂರು ಗ್ರಾಮದಲ್ಲಿ ಶುಕ್ರವಾರ ನಡೆದ ‘ಭ್ರಷ್ಟಾಚಾರ ನಿಗ್ರಹದಲ್ಲಿ ಸಾರ್ವಜನಿಕರ ಪಾತ್ರ‘ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ವಿಜಯಕುಮಾರ ಮಾತನಾಡಿದರು
ಶಕ್ತಿನಗರ ಬಳಿಯ ದೇವಸೂಗೂರು ಗ್ರಾಮದಲ್ಲಿ ಶುಕ್ರವಾರ ನಡೆದ ‘ಭ್ರಷ್ಟಾಚಾರ ನಿಗ್ರಹದಲ್ಲಿ ಸಾರ್ವಜನಿಕರ ಪಾತ್ರ‘ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ವಿಜಯಕುಮಾರ ಮಾತನಾಡಿದರು   

ದೇವಸೂಗೂರು (ಶಕ್ತಿನಗರ): ಭ್ರಷ್ಟಾಚಾರದ ನಿಗ್ರಹ ದಳಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ವಿಜಯಕುಮಾರ ಹೇಳಿದರು.

ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ದೇವಸೂಗೂರು ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ದಾಸೋಹ ಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ್ದ ಭ್ರಷ್ಟಾಚಾರ ನಿಗ್ರಹದಲ್ಲಿ ಸಾರ್ವಜನಿಕರ ಪಾತ್ರ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭ್ರಷ್ಟಾಚಾರ ನಿಗ್ರಹ ದಳವು ವ್ಯವಸ್ಥೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಕ್ಕಾಗಿಯೇ ಸ್ಥಾಪನೆಗೊಂಡಿದೆ. ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ನಿರ್ವಹಣೆಯ ಕಾರ್ಯವಿಧಾನದ ಬಗ್ಗೆ ತಿಳಿದುಕೊಂಡಿರಬೇಕು. ಅಧಿಕಾರಿಗಳಿಂದ ತೊಂದರೆಗೊಳಗಾದ ಸಾರ್ವಜನಿಕರು, ದೂರನ್ನು ನೀಡಲು ಹಿಂಜರಿಯಬಾರದು ಎಂದು ಹೇಳಿದರು.

ADVERTISEMENT

ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಸಿಪಿಐ ವಿ.ಎಂ.ಮಠಪತಿ, ಸೂಗೂರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಂಪನಗೌಡ ಪೊಲೀಸ್ ಪಾಟೀಲ್, ಮುಖ್ಯ ಅಧಿಕಾರಿ ಪಿ.ಶಾಂತಮ್ಮ, ದೇವಸೂಗೂರು ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ, ಅರಳಪ್ಪ , ಚನ್ನಪ್ಪ ಮಡಿವಾಳ, ಸೂಗೂರೇಶ ತಮ್ಮುಡು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.