ADVERTISEMENT

ಅಪಘಾತ: ಟಾಟಾ ಏಸ್ ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2023, 7:05 IST
Last Updated 6 ಫೆಬ್ರುವರಿ 2023, 7:05 IST

ಮಸ್ಕಿ: ತಾಲ್ಲೂಕಿನ ಹಸಮಕಲ್ ಗ್ರಾಮದ ಬಳಿ ಶನಿವಾರ ರಾತ್ರಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಏಸ್ ನಡುವೆ ನಡೆದ ಅಪಘಾತದಲ್ಲಿ ಟಾಟಾ ಏಸ್ ಚಾಲಕ ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಮಹಾದೇವ (40) ಮೃತರು.

ಸರಕು ಸಾಗಿಸಲು ಬಂದಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.