ADVERTISEMENT

ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಮೇ 2025, 15:39 IST
Last Updated 30 ಮೇ 2025, 15:39 IST
ಮಾನ್ವಿಯಲ್ಲಿ ಶುಕ್ರವಾರ ಕರವೇ ಕಾರ್ಯಕರ್ತರು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು
ಮಾನ್ವಿಯಲ್ಲಿ ಶುಕ್ರವಾರ ಕರವೇ ಕಾರ್ಯಕರ್ತರು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು   

ಮಾನ್ವಿ: ನಟ ಕಮಲ್ ಹಾಸನ್ ಅವರ ಕನ್ನಡ ಭಾಷಾ ವಿರೋಧಿ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಎಚ್.ಶಿವರಾಮೇಗೌಡ ಬಣ) ಕಾರ್ಯಕರ್ತರು ಪಟ್ಟಣದಲ್ಲಿ ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹ ಮಾತನಾಡಿ,‘ನಟ ಕಮಲ್ ಹಾಸನ್ ಕನ್ನಡ ಭಾಷೆಯ ಇತಿಹಾಸ, ಪ್ರಾಚೀನತೆಗೆ ಅಗೌರವ ತೋರಿದ್ದಾರೆ. ಸಮಸ್ತ ಕನ್ನಡಿಗರಿಗೆ ಅವಮಾನ ಮಾಡಿದಂತಾಗಿದೆ. ಅದ್ದರಿಂದ ನಟ ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೋರದಿದ್ದರೆ ಜೂನ್ 5ರಂದು ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಿತ್ರವನ್ನು ಬಹಿಷ್ಕರಿಸಲಾಗುವುದು ಹಾಗೂ ಕಪ್ಪು ಪಟ್ಟಿ ಧರಿಸಿ ಅಣಕು ಶವಯಾತ್ರೆ ಮೂಲಕ ಪ್ರತಿಭಟಿಸಲಾಗುವುದು’ ಎಂದು ತಿಳಿಸಿದರು.

ಕರವೇ ಪದಾಧಿಕಾರಿಗಳಾದ ಕೆ.ಶಿವಕುಮಾರ, ಭೀಮಣ್ಣ ಮುದಗಲ್, ದೀಪಕ್ ಯಾದವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.