ADVERTISEMENT

‘ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನ ಮಾಡಿ’: ಬಿ.ಕೆ.ಅಮರೇಶಪ್ಪ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 13:05 IST
Last Updated 3 ಜೂನ್ 2025, 13:05 IST
ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಕೆ.ಅಮರೇಶಪ್ಪ ಮಾತನಾಡಿದರು
ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಕೆ.ಅಮರೇಶಪ್ಪ ಮಾತನಾಡಿದರು   

ಮಾನ್ವಿ: ‘ರಾಜ್ಯ ಸರ್ಕಾರ ಯುವ ಸಮೂಹ ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರ ಜೀವನಮಟ್ಟ ಸುಧಾರಣೆಗಾಗಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಅಗತ್ಯ’ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಬಿ.ಕೆ.ಅಮರೇಶಪ್ಪ ಹೇಳಿದರು.

ತಾಲ್ಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವತಿಯಿಂದ ‘ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ’ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆ ಫಲಾನುಭವಿಗಳಿಂದ ಸಮಸ್ಯೆ ಕುರಿತು ಮಾಹಿತಿ ಪಡೆಯಲಾಯಿತು.

ADVERTISEMENT

ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮನ್ಸೂರ್ ಅಹ್ಮದ್, ಜೆಸ್ಕಾಂ ಇಲಾಖೆ ಎಂಜಿನಿಯರ್ ಅಬ್ದುಲ್ ರೆಹಮಾನ್, ಪಿಡಿಒ ಅಕ್ತರ್ ಪಾಷಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಕನಕಪ್ಪ, ಗುಂಡಮ್ಮ, ನಾಗೇಶ ರಾಜಲಬಂಡ ಹಾಗೂ ತಾ.ಪಂ ವ್ಯವಸ್ಥಾಪಕ ಬಸವರಾಜ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.