ADVERTISEMENT

ಏಮ್ಸ್‌ ಬೇಡಿಕೆ: ಎಂಟನೇ ದಿನಕ್ಕೆ ಧರಣಿ

​ಪ್ರಜಾವಾಣಿ ವಾರ್ತೆ
Published 20 ಮೇ 2022, 14:47 IST
Last Updated 20 ಮೇ 2022, 14:47 IST

ರಾಯಚೂರು: ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರು ಜಿಲ್ಲಾ ಏಮ್ಸ್‌ ಹೋರಾಟ ಸಮಿತಿಯಿಂದ ಆರಂಭಿಸಿರುವ ಧರಣಿಯು ಶುಕ್ರವಾರ ಎಂಟನೇ ದಿನಕ್ಕೆ ಕಾಲಿರಿಸಿದೆ.

ದಿನದಿಂದ ದಿನಕ್ಕೆ ಹೋರಾಟವು ವ್ಯಾಪಕವಾಗುತ್ತಿದ್ದು, ವಿವಿಧ ಸಂಘ–ಸಂಸ್ಥೆಗಳು ಬೆಂಬಲ ಸೂಚಿಸಿ ಧರಣಿಯಲ್ಲಿ ಪಾಲ್ಗೊಳ್ಳುತ್ತಿವೆ. ಹಿಂದುಳಿದ ಪ್ರದೇಶದಲ್ಲಿ ಕೇಂದ್ರದ ಸಂಸ್ಥೆಯೊಂದನ್ನು ಸ್ಥಾಪಿಸಬೇಕು ಎಂದು ನಂಜುಂಡಪ್ಪ ವರದಿಯಲ್ಲಿ ಹೇಳಲಾಗಿತ್ತು. ಆದರೆ ರಾಯಚೂರಿಗೆ ಬರಬೇಕಿದ್ದ ಐಐಟಿ ಕೈ ತಪ್ಪಿಸಲಾಗಿದೆ. ಈಗ ಏಮ್ಸ್‌ ಸಂಸ್ಥೆ ರಾಯಚೂರಿನಲ್ಲಿ ಸ್ಥಾಪಿಸುವುದಕ್ಕೆ ಅವಕಾಶವಿದ್ದು, ರಾಜ್ಯ ಸರ್ಕಾರದ ಮೇಲೆ ಜಿಲ್ಲೆಯ ರಾಜಕಾರಣಿಗಳು ಒತ್ತಡ ಹಾಕಬೇಕು. ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗುವವರೆಗೂ ಧರಣಿ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.

ಸಮಿತಿ ಅಧ್ಯಕ್ಷ ಬಸವರಾಜ ಕಳಸ, ಅಶೋಕಕುಮಾರ್‌ ಜೈನ್‌, ಎಸ್‌.ಮಾರೆಪ್ಪ, ಅಂಬಣ್ಣ ಅರೋಲಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಧರಣಿಯಲ್ಲಿ ಸಕ್ರಿಯ ನೇತೃತ್ವ ವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.