ADVERTISEMENT

ಏಮ್ಸ್ ಹೋರಾಟ: 1095 ದಿನ ಪೂರ್ಣ

​ಪ್ರಜಾವಾಣಿ ವಾರ್ತೆ
Published 11 ಮೇ 2025, 16:04 IST
Last Updated 11 ಮೇ 2025, 16:04 IST
ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಪದಾಧಿಕಾರಿಗಳು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು
ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಪದಾಧಿಕಾರಿಗಳು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು    

ರಾಯಚೂರು: ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಭಾನುವಾರ 1095ನೇ ದಿನಕ್ಕೆ ಪದಾರ್ಪಣೆ ಮಾಡಿದೆ.

ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ, ವಿಶೇಷ ಸ್ಥಾನಮಾನ ಕೊಳಪಟ್ಟ, ಐಐಟಿ ಇಂದ ವಂಚಿತಗೊಂಡ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಬೇಕು ಎಂದು ಕೇಂದ್ರ ಸರಕಾರಕ್ಕೆ ಒತ್ತಾಯಿಸಿದರು.

ಡಾ.ಬಸವರಾಜ ಕಳಸ, ಎಸ್. ತಿಮ್ಮಾರೆಡ್ಡಿ, ಶ್ರೀನಿವಾಸ ನಾಗಲದಿನ್ನಿ, ವೆಂಕಟರೆಡ್ಡಿ ದಿನ್ನಿ, ಗುರುರಾಜ ಕುಲಕರ್ಣಿ, ಎಸ್.ಎಸ್ ಪಾಟೀಲ, ವೀರಭದ್ರಯ್ಯ ಸ್ವಾಮಿ, ಕೆ. ವೀರೇಶ ಬಾಬು, ವೆಂಕಯ್ಯ ಶೆಟ್ಟಿ ಹೊಸಪೇಟೆ, ಬಾಬು ಕವಿತಾಳ, ಜಾನ್ ವೆಸ್ಲಿ, ಆಂಜನೇಯ ಕುರುಬದೊಡ್ಡಿ, ಹೇಮರಾಜ ಅಸ್ಕಿಹಾಳ ಧರಣಿಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.