ADVERTISEMENT

ರಾಯಚೂರು | ವಿಮಾನ ನಿಲ್ದಾಣ ಕಾಮಗಾರಿ ತ್ವರಿತಗೊಳಿಸಿ: ಜಿಲ್ಲಾಧಿಕಾರಿ ನಿತೀಶ್

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 4:48 IST
Last Updated 13 ಸೆಪ್ಟೆಂಬರ್ 2025, 4:48 IST
ರಾಯಚೂರು ತಾಲ್ಲೂಕಿನ ಯರಮರಸ್ ಹೊರವಲಯದಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ನಿತೀಶ್ ಕೆ. ಪರಿಶೀಲಿಸಿದರು. ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ ಗಲಗ ಹಾಜರಿದ್ದರು
ರಾಯಚೂರು ತಾಲ್ಲೂಕಿನ ಯರಮರಸ್ ಹೊರವಲಯದಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ನಿತೀಶ್ ಕೆ. ಪರಿಶೀಲಿಸಿದರು. ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ ಗಲಗ ಹಾಜರಿದ್ದರು   

ರಾಯಚೂರು: ‘ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಿ ಆದಷ್ಟು ಶೀಘ್ರ ಪೂರ್ಣಗೊ ಳಿಸಲು ಪ್ರಯತ್ನಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ ನೀಡಿದರು.

ಇಲ್ಲಿಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಉದ್ದೇಶಿತ ಸ್ಥಳವಾದ ಯರಮರಸ್ ಹೊರವಲಯದ ಪ್ರದೇಶಕ್ಕೆ ಭೇಟಿ ನೀಡಿ ಕಾಮಗಾರಿಯ ಪರಿವೀಕ್ಷಣೆ ನಡೆಸಿ ಮಾತನಾಡಿದರು.

‘ವಿಮಾನ ನಿಲ್ದಾಣ ಕಾಮಗಾರಿಯಲ್ಲಿ ಪ್ರಸ್ತಾಪಿಸಿರುವ ರನ್‌ವೇ, ಸಿಆರ್‌ಎಫ್ ಕಟ್ಟಡ, ಎಟಿಸಿ ಕಟ್ಟಡ ಮತ್ತು ಮಾಸ್ಟರ್ ಪ್ಲಾನ್‌ನಲ್ಲಿ ತೋರಿಸಿದ ಎಲ್ಲ ಕಾಮಗಾರಿಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಪೂರ್ಣವಾಗಬೇಕು’ ಎಂದು ಸೂಚನೆ ನೀಡಿದರು.

ADVERTISEMENT

‘ಪ್ರಸ್ತುತ ವಿಮಾನ ನಿಲ್ದಾಣದ 2.5 ಕಿ.ಮೀ ಉದ್ದದ ರನ್ ವೇ ಕಾಮಗಾರಿ ಪೂರ್ಣಗೊಂಡಿದೆ. ನಿಲ್ದಾಣದ ಆವರಣ ಗೋಡೆ ಕಾಮಗಾರಿ ಶೇ 70ರಷ್ಟು ಮುಗಿದಿದೆ. ಪ್ಯಾಸೆಂಜರ್ ಟರ್ಮಿನಲ್ ಕಟ್ಟಡಕ್ಕೆ ಬುನಾದಿ ಫೂಟಿಂಗ್ ಹಾಕುವ ಕಾಮಗಾರಿ ಪೂರ್ಣವಾಗಿದೆ. ಸಿಎಫ್‌ಆರ್ ಕಟ್ಟಡಕ್ಕೆ ಪುಟ್ಟಿಂಗ್ ಹಾಕುವ ಕಾಮಗಾರಿ ಸಹ ಪೂರ್ಣವಾಗಿದೆ’ ಎಂದು ಮಾಹಿತಿ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ ಗಲಗ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಶಕುಮಾರ, ವಿಮಾನ ನಿಲ್ದಾಣದ ಎಂಜಿನಿಯರ್ ಪ್ರವೀಣ ಹಾಗೂ ಸಂಬಂಧಿಸಿದ ಗುತ್ತಿಗೆದಾರರು, ಎಂಜಿನಿಯರ್‌ಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.