ADVERTISEMENT

ಡಿಸೆಂಬರ್‌ನಲ್ಲಿ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 16:23 IST
Last Updated 16 ಸೆಪ್ಟೆಂಬರ್ 2024, 16:23 IST

ರಾಯಚೂರು: ಡಿಸೆಂಬರ್ ಕೊನೆಯ ವಾರದಲ್ಲಿ ರಾಯಚೂರಿನಲ್ಲಿ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಅರ್ಜುನ ಗೊಳಸಂಗಿ ಹೇಳಿದರು.

ಎರಡು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ರಾಜ್ಯದ 31 ಜಿಲ್ಲೆಗಳಿಂದ ಸಾಹಿತಿಗಳು, ಪ್ರಗತಿಪರ ಚಿಂತಕರು, ದಲಿತಪರ ಹೋರಾಟಗಾರರು, ಬುದ್ಧ, ಬಸವ, ಅಂಬೇಡ್ಕರ್ ಅನುಯಾಯಿಗಳು ಭಾಗವಹಿಸಲಿದ್ದಾರೆ ಎಂದು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಎರಡು ದಿನಗಳ ಸಮ್ಮೇಳನದಲ್ಲಿ 4 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲರಿಗೂ ವಸತಿ ಮತ್ತು ಊಟದ ವ್ಯವಸ್ಥೆಯನ್ನು ದಲಿತ ಸಾಹಿತ್ಯ ಪರಿಷತ್ತು ಸ್ಥಳೀಯರ ಸಹಕಾರದಿಂದ ಏರ್ಪಾಟು ಮಾಡಲಿದೆ ಎಂದು ಹೇಳಿದರು.

ADVERTISEMENT

ಸಮ್ಮೇಳನದಲ್ಲಿ ವಿಶೇಷ ಉಪನ್ಯಾಸ, ಸಾಹಿತ್ಯ ವಿಚಾರ ಸಂಕಿರಣ, ಕವಿಗೋಷ್ಠಿ, ಸಂವಾದ ಗೋಷ್ಠಿಗಳು ನಡೆಯಲಿದೆ. ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಸಾಧಕರನ್ನು ಸನ್ಮಾನಿಸಲಾಗುವುದು. ಸಮ್ಮೇಳನದಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ಹಾಗೂ ಕಲೆ, ಪುಸ್ತಕ ಪ್ರದರ್ಶನ, ಮಾರಾಟ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

ವಿಶೇಷವಾಗಿ ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಉಚಿತ ಪ್ರವೇಶವಿದೆ. ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 31 ಕೊನೆಯ ದಿನ. ಸಮ್ಮೇಳನದಲ್ಲಿ ನೋಂದಣಿ ದೂರವಾಣಿ ಮೂಲಕ ಇಲ್ಲವೆ ವಾಟ್ಸ್‌ಆ್ಯಪ್ ಸಂಖ್ಯೆ 94487 89322 ಅಥವಾ 97429 26390 ಸಂದೇಶ ಕಳಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಪದಾಧಿಕಾರಿಗಳಾದ ಎಚ್.ಬಿ. ಕೊಲ್ಕಾರ್, ಭೀಮಣ್ಣ, ತಾಯರಾಜ್ ಮರ್ಚೆಟ್ಹಾಳ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.