ADVERTISEMENT

ಮೇ 20ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

​ಪ್ರಜಾವಾಣಿ ವಾರ್ತೆ
Published 14 ಮೇ 2025, 16:30 IST
Last Updated 14 ಮೇ 2025, 16:30 IST
ಬಾಷುಮಿಯಾ
ಬಾಷುಮಿಯಾ   

ಸಿಂಧನೂರು: ‘ಕೇಂದ್ರ ಸರ್ಕಾರ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳನ್ನು ರದ್ದುಪಡಿಸುವುದು ಸೇರಿದಂತೆ 22 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ20 ರಂದು ಕಾರ್ಮಿಕರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದೆ. ಅದರ ಅಂಗವಾಗಿ ಸಿಂಧನೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು’ ಎಂದು ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಬಾಷುಮಿಯಾ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಐಸಿಸಿಟಿಯು ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ್ ಪೂಜಾರ್ ಮಾತನಾಡಿ, ‘ಮೇ20 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಿನಿವಿಧಾನಸೌಧ ಕಚೇರಿಯವರೆಗೆ ನೂರಾರು ಕಾರ್ಮಿಕರೊಂದಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಬಳಿಕ ಮಿನಿವಿಧಾನಸೌಧ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು. ಅಂದು ಎಲ್ಲ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲಿಸಬೇಕು. ಎಲ್ಲ ವಿಭಾಗದ ಕಾರ್ಮಿಕರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಿ.ಎಚ್.ಕಂಬಳಿ, ಸಿಐಟಿಯು ಮುಖಂಡರಾದ ಎಂ.ಗೋಪಾಲಕೃಷ್ಣ, ಎಸ್.ದೇವೇಂದ್ರಗೌಡ, ಎಐಸಿಸಿಟಿಯು ಮುಖಂಡರಾದ ಬಸವರಾಜ ಎಕ್ಕಿ, ಬಸವರಾಜ ಕೊಂಡೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.