ADVERTISEMENT

ರಾಯಚೂರು | ಪಿಡಿಒ ವಿರುದ್ಧ ಅವ್ಯವಹಾರ ಆರೋಪ: ಬೀಗ ಜಡಿದು ಪ್ರತಿಭಟನೆಯ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 15:06 IST
Last Updated 16 ಆಗಸ್ಟ್ 2024, 15:06 IST

ರಾಯಚೂರು: ಸಿಂಧನೂರು ತಾಲ್ಲೂಕಿನ ಆರ್‌ಎಚ್‌ ಕ್ಯಾಂಪ್–1 ಪಂಚಾಯಿತಿಯಲ್ಲಿ ಪಿಡಿಒ ಅವರು ಭಾರಿ ಅವ್ಯವಹಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಒಂದು ವಾರದೊಳಗೆ ತನಿಖೆ ನಡೆಸದಿದ್ದರೆ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ರೆಹಮತ್ ಪಾಷಾ ಎಚ್ಚರಿಕೆ ನೀಡಿದರು.

‘15ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ಮಾಡದೇ ಬೋಗಸ್ ಬಿಲ್ ಮಾಡಿ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.

ನಾನು ಪಂಚಾಯಿತಿ ಅಧ್ಯಕ್ಷನಾಗಿ ಒಂದು ವರ್ಷ ಕಳೆದಿದೆ. ಈ ಹಿಂದೆ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಮತ್ತು ಅನುದಾನ ಬಳಕೆ ಕುರಿತು ಮಾಹಿತಿ ನೀಡುವಂತೆ ಪಿಡಿಒಗೆ ಕೇಳಿದರೂ ಮಾಹಿತಿ ನೀಡುತ್ತಿಲ್ಲ. ಪಂಚಾಯಿತಿಗೆ ಸಾಕಷ್ಟು ಅನುದಾನ ಬಂದರೂ ಕಾಮಗಾರಿಗೆ ಬಳಸದೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದರು.

ADVERTISEMENT

ಪಂಚಾಯಿತಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಜಿಲ್ಲಾ ಪಂಚಾಯತಿ ಸಿಇಒ ಮತ್ತು ತಾಲ್ಲೂಕು ಪಂಚಾಯಿತಿ ಇ.ಒ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಒಂದು ವಾರದಲ್ಲಿ ಸೂಕ್ತ ತನಿಖೆ ನಡೆಸಿ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯ ರಾಮಣ್ಣ ಹಾಗೂ ವಾಸು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.