
ಲಿಂಗಸುಗೂರು: ತಾಲ್ಲೂಕಿನ ನರಕಲದಿನ್ನಿ ಗ್ರಾಮ ಪಂಚಾಯಿತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ ಮಾಡಿದ ಪಿಡಿಒ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ನರಕಲದಿನ್ನಿ ಗ್ರಾಮ ಪಂಚಾಯಿತಿಗೆ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಿಂದ ಅನುಮೋದನೆ ಪಡೆಯದೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಇದನ್ನು ಕೂಡಲೇ ರದ್ದುಗೊಳಿಸಿ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿಗಳು ಪತ್ರದ ಮೂಲಕ ಸೂಚನೆ ನೀಡಿದ್ದರೂ ನರಕಲದಿನ್ನಿ ಪಿಡಿಒ, ತಾ.ಪಂ ಇಒ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ. ಅನಧಿಕೃತ ನೇಮಕಾತಿ ರದ್ದುಗೊಳಿಸಬೇಕು, ಸರ್ಕಾರದ ನಿಯಮ ಉಲ್ಲಂಘಿಸಿದ ಹಾಗೂ ಮೇಲಧಿಕಾರಿಗಳ ಆದೇಶಕ್ಕೂ ಬೆಲೆ ನೀಡದ ನರಕಲದಿನ್ನಿ ಪಿಡಿಓ ಹಾಗೂ ತಾ.ಪಂ ಇಒ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಗ್ರಾಮಸ್ಥರಾದ ದುರಗಪ್ಪ, ಸಿದ್ದಪ್ಪ, ರಾಘವೇಂದ್ರ, ರಾಮಪ್ಪ, ಸುರೇಶ, ಲಾಲಪ್ಪ, ದುರಗಪ್ಪ, ಶರಣಪ್ಪ, ಅಮರೇಶ, ನಾಗಪ್ಪ, ರಾಜಣ್ಣ, ಶಿವರಾಯಪ್ಪ, ಶರಣಪ್ಪ ,ಮಹಾಂತೇಶ, ಲಚಮಪ್ಪ, ಮಾನಪ್ಪ, ಹುಲಗಪ್ಪ, ಹಾಗೂ ಇನ್ನಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.