ಸಿಂಧನೂರು: ನಗರದ ರಾಯಚೂರು, ಕುಷ್ಟಗಿ ಹಾಗೂ ಗಂಗಾವತಿ ಮಾರ್ಗದ ರಸ್ತೆ ಸೇರಿದಂತೆ ಇತರ ಸರ್ಕಾರಿ ಜಾಗೆಗಳಲ್ಲಿದ್ದ ಶೆಡ್ ಮತ್ತು ಅಂಗಡಿಗಳನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಬೀದಿಬದಿ ವ್ಯಾಪಾರಸ್ಥರು ಕಳೆದ ಎರಡು ತಿಂಗಳಿನಿಂದ ತೊಂದರೆ ಅನುಭವಿಸುತ್ತಿದ್ದು, ಅವರಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ನಗರಸಭೆ ಆಡಳಿತ ಮಂಡಳಿ ಭರವಸೆ ನೀಡಿತು.
ನಗರಸಭೆಯ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯುತ್ತಿದ್ದಾಗ ಬೀದಿಬದಿ ಹೋರಾಟ ಸಮಿತಿಯ ಮುಖಂಡರಾದ ನಾಗರಾಜ ಪೂಜಾರ್, ಖಾಸಿಂಸಾಬ್, ಶ್ಯಾಮೀದ್‍ಸಾಬ್ ಮತ್ತಿತರರು ಒಳಗೆ ಬಂದು ತಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದರು. ಸಭೆ ಮುಗಿಯುವತನಕ ನೂರಾರು ಬೀದಿಬದಿ ವ್ಯಾಪಾರಸ್ಥರು ಹೊರಗೆ ಕುಳಿತು ಕಾದರು.
ಸಭೆ ಮುಗಿದ ನಂತರ ಅಧ್ಯಕ್ಷೆ ಪ್ರಿಯಾಂಕಾ ರೋಹಿತ್, ಉಪಾಧ್ಯಕ್ಷೆ ಮಂಜುಳಾ ಪ್ರಭುರಾಜ್, ಪೌರಾಯುಕ್ತ ಮಂಜುನಾಥ ಗುಂಡೂರು, ಸದಸ್ಯರಾದ ಮಲ್ಲಿಕಾರ್ಜುನ ಪಾಟೀಲ್, ಕೆ.ಜಿಲಾನಿಪಾಷಾ, ಮುರ್ತುಜಾ ಹುಸೇನ್, ಚಂದ್ರಶೇಖರ ಮೈಲಾರ, ಕೆ.ರಾಜಶೇಖರ, ಆಲಂಸಾಬ, ಎಚ್.ಬಾಷಾ ಮತ್ತಿತರರು ಬೀದಿಬದಿ ವ್ಯಾಪಾರಿಗಳ ಬಳಿ ಬಂದು ಆದಷ್ಟು ಶೀಘ್ರ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.