ಮಸ್ಕಿ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಂ ಅವರ ಜಯಂತಿ ನಿಮಿತ್ತ ಪಟ್ಟಣದಲ್ಲಿ ಶುಕ್ರವಾರ ಪಟ್ಟಣದಲ್ಲಿ ಇಬ್ಬರು ಮಹನೀಯರ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಗಾಂಧಿನಗರದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಶಾಸಕ ಆರ್. ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪುರಸ್ಕೃತರೂ ಜನಪರ ಕವಿ ಸಿ. ದಾನಪ್ಪ, ದೊಡ್ಡಪ್ಪ ಮುರಾರಿ, ಎಚ್. ಬಿ. ಮುರಾರಿ, ಹನುಮಂತಪ್ಪ ಮುದ್ದಾಪೂರ, ದೊಡ್ಡ ಕರಿಯಪ್ಪ, ಮೌನೇಶ ಮುರಾರಿ, ಹನುಮಂತಪ್ಪ ವೆಂಕಟಾಪೂರ, ಮಲ್ಲಯ್ಯ ಬಳ್ಳಾ, ಅಶೋಕ ಮುರಾರಿ, ದುರ್ಗರಾಜ ವಟಗಲ್, ರಾಘವೇಂದ್ರ ನಾಯಕ, ಮಲ್ಲಯ್ಯ ಚಲುವಾದಿ, ಅಶೋಕ ಕಟ್ಟಿಮನಿ, ಬಸವರಾಜ, ಗೌಸ್ ಪಾಷಾ, ಮೌನೇಶ, ರಾಮಸ್ವಾಮಿ ಸೇರಿದಂತೆ ಡಾ. ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.
ಪಟ್ಟಣದ ವೃತ್ತಗಳಲ್ಲಿ ನೀಲಿ ಧ್ವಜದಿಂದ ಅಲಂಕಾರ ಮಾಡಲಾಗಿತ್ತು. ಮೆರವಣಿಗೆಯಲ್ಲಿ ಪುನಿತ್ ರಾಜ್‌ಕುಮಾರ್ ಅವರ ಭಾವಚಿತ್ರ ಹಿಡಿದು ಯುವಕರು ಕುಣಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.