ADVERTISEMENT

Republic Day; ಅಂಬೇಡ್ಕರ್‌ ಭಾವಚಿತ್ರ ಎತ್ತಿಟ್ಟು ಧ್ವಜಾರೋಹಣ!

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 12:04 IST
Last Updated 27 ಜನವರಿ 2022, 12:04 IST
ರಾಯಚೂರು ಜಿಲ್ಲಾ ಕೋರ್ಟ್‌ ಸಂಕೀರಣದಲ್ಲಿ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸುವ ಪೂರ್ವ ಮಹಾತ್ಮಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು
ರಾಯಚೂರು ಜಿಲ್ಲಾ ಕೋರ್ಟ್‌ ಸಂಕೀರಣದಲ್ಲಿ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸುವ ಪೂರ್ವ ಮಹಾತ್ಮಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು   

ರಾಯಚೂರು: ಇಲ್ಲಿನ ಜಿಲ್ಲಾ ಕೋರ್ಟ್‌ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಸ್ತಂಭದ ಬಳಿ ಇರಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಎತ್ತಿಟ್ಟು, ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವೊಂದಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು.

ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆದುಹಾಕಿದ್ದಕ್ಕಾಗಿ ಕೆಲವು ವಕೀಲರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಕೆಲಕಾಲ ಸ್ಥಳದಲ್ಲಿ ವಾಗ್ವಾದವೂ ನಡೆಯಿತು.

ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆಸಿರುವುದಕ್ಕೆ ಸ್ಪಷ್ಟನೆಯನ್ನು ಯಾರೂ ನೀಡಲಿಲ್ಲ. ಆದರೆ,ಸಮಾರಂಭದ ವಿಡಿಯೋ ದೃಶ್ಯಾವಳಿಗಳು ವೈರಲ್‌ ಆಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.