ಸಿಂಧನೂರು: ತಾಲ್ಲೂಕಿನ ಸಿದ್ಧಪರ್ವತ ಅಂಬಾಮಠದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಅಂಬಾದೇವಿ ದೇವಸ್ಥಾನದ ಶಿಲಾವಿನ್ಯಾಸ ಕಾಮಗಾರಿ ಸ್ಥಳಕ್ಕೆ ಮಾಜಿ ಸಂಸದ ಕೆ.ವಿರೂಪಕ್ಷಪ್ಪ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಅಂಬಾದೇವಿ ಮೂರ್ತಿಯ ಮೂಲ ಚಕ್ರಕ್ಕೆ ಪೂಜೆ ಸಲ್ಲಿಸಿದ ನಂತರ ದೇವಸ್ಥಾನದ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಿಸಿ ಮಾಹಿತಿ ಪಡೆದುಕೊಂಡರು.
ಅಂಬಾದೇವಿ ದೇವಸ್ಥಾನದ ನೂತನ ಶಿಲಾವಿನ್ಯಾಸ ಕಾಮಗಾರಿ ಗುಣಮಟ್ಟ ಕಾಯ್ದುಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ರಾಜ್ಯದಲ್ಲಿಯೇ ಮಾದರಿ ದೇವಸ್ಥಾನ ನಿರ್ಮಾಣವಾಗಬೇಕು ಎಂದು ಕೆ.ವಿರೂಪಾಕ್ಷಪ್ಪ ತಿಳಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಗುರುದತ್ತ ಭಟ್, ಕಾರ್ಯದರ್ಶಿ ಹನುಮೇಶ ಆಚಾರ್, ಸಿಬ್ಬಂದಿ ರಾಜಾರಾಮ್ ಸಿಂಗ್, ಮಾಳಿಂಗರಾಯ, ಸಿದ್ದು, ವಿರೋಜಿರಾವ್ ಮರಾಠ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.