ADVERTISEMENT

ಮಸ್ಕಿ: ವಿವಿಧೆಡೆ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2025, 13:41 IST
Last Updated 21 ಜನವರಿ 2025, 13:41 IST
ಮಸ್ಕಿಯಲ್ಲಿ ಮಂಗಳವಾರ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ತಾಲ್ಲೂಕು ಆಡಳಿತದ ಪರವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು
ಮಸ್ಕಿಯಲ್ಲಿ ಮಂಗಳವಾರ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ತಾಲ್ಲೂಕು ಆಡಳಿತದ ಪರವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು   

ಮಸ್ಕಿ: ತಾಲ್ಲೂಕು ಆಡಳಿತ ಸೇರಿದಂತೆ ಪಟ್ಟಣದ ವಿವಿಧೆಡೆ ಮಂಗಳವಾರ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ನಡೆಯಿತು.

ಗಚ್ಚಿನಮಠದ ಪಕ್ಕದಲ್ಲಿ ಅಂಬಿಗರ ಚೌಡಯ್ಯ ವೃತ್ತದಲ್ಲಿ ಅವರ ಭಾವಚಿತ್ರಕ್ಕೆ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ತಾಲ್ಲೂಕು ಆಡಳಿತದ ಪರವಾಗಿ ತಹಶೀಲ್ದಾರ್ ಮಲ್ಲಪ್ಪ ಯರಗೋಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಅಪ್ಪಾಜಿಗೌಡ ಪಾಟೀಲ, ಶರಣಯ್ಯ ಸೊಪ್ಪಿಮಠ, ಮಲ್ಲಯ್ಯ ಬಳ್ಳಾ, ಮೌನೇಶ ಮುರಾರಿ, ಮಲ್ಲಯ್ಯ ಮುರಾರಿ, ಪುರಸಭೆ ಮ್ಯಾನೇಜರ್ ಸತ್ಯನಾರಾಯಣ, ಗಂಗಾಮತಸ್ಥ ಸಮಾಜದ ಮುಖಂಡ ರಾಜಾನಾಯಕ, ರೈತರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಭೂಷಣ, ಮಲ್ಲಪ್ಪ ಸೇರಿದಂತೆ ಅನೇಕರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ತಹಶೀಲ್ದಾರ್ ಕಚೇರಿ, ಶಾಸಕರ ಸರ್ಕಾರಿ ಕಚೇರಿ, ಪುರಸಭೆ, ಬಿಜೆಪಿ ಹಾಗೂ ಕಾಂಗ್ರೆಸ್ ಕಚೇರಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.