ADVERTISEMENT

ರಾಯಚೂರು: ದೇವದುರ್ಗದಲ್ಲಿ ವಿವಿಧ ಕಾಮಗಾರಿಗಳಿಗೆ ಅಮಿತ್ ಶಾ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 10:36 IST
Last Updated 26 ಮಾರ್ಚ್ 2023, 10:36 IST
 ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ₹4,138 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭಾನುವಾರ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
 ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ₹4,138 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭಾನುವಾರ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.   

ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ₹4,138 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭಾನುವಾರ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ರಾಜ್ಯದಲ್ಲಿ ಮುಸ್ಲಿಮರಿಗೆ ಇದ್ದ ಶೇ 4 ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಲಿಂಗಾಯತರಿಗೆ ಶೇ 2 ಹಾಗೂ ಒಕ್ಕಲಿಗರಿಗೆ ಶೇ 2 ರಷ್ಟು ವಿಂಗಡನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮವನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಶ್ಲಾಘಿಸಿದರು.

ಕಾಂಗ್ರೆಸ್‌ನಿಂದ ರಾಜ್ಯವನ್ನು ಅಭಿವೃದ್ಧಿ ಮಾಡಲು ಸಾಧ್ಯವೇ? ಎಂದು ಜನರನ್ನು ಪ್ರಶ್ನಿಸಿದ ಅವರು, ಎಲ್ಲರಿಗೂ ನ್ಯಾಯ ಕಲ್ಪಿಸುವ ಕೆಲಸವನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ಬಿಜೆಪಿಯನ್ನು ಬಹುಮತದಿಂದ ಆಯ್ಕೆ ಮಾಡಿ. ಈ ಹಿಂದೆ ನಡೆದ ಚುನಾವಣೆಯಲ್ಲಿ 40 ರಷ್ಟು ಸೀಟುಗಳನ್ನು ಗೆದ್ದಿದ್ದ ಕುಮಾರಸ್ವಾಮಿ, ಕಾಂಗ್ರೆಸ್ ಕುದುರೆ ಏರಿ ಸರ್ಕಾರ ರಚನೆ ಮಾಡಿದ್ದರು ಎಂದರು.

ADVERTISEMENT

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಲೂಟಿ ಮಾಡುವುದನ್ನು ಬಿಟ್ಟರೆ‌ ಬೇರೆನೂ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಕರ್ನಾಟಕದಿಂದ ದೆಹಲಿಗೆ ಹಣ ಕಳುಹಿಸಬೇಕಾಗುತ್ಯದೆ ಎಂದು ಆರೋಪಿಸಿದರು.

'ರಾಯಚೂರು' ಜಿಲ್ಲೆಯನ್ನು 'ರಾಯಪೂರ' ಎಂದು ಭಾಷಣದುದ್ದಕ್ಕೂ ಉಲ್ಲೇಖಿಸಿ ಮಾತನಾಡಿದ್ದು, ಜನರಿಗೆ ಬೇಸರ ಮೂಡಿಸಿತು.
ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವಂತೆ ಶಾಸಕ ಶಿವನಗೌಡ ನಾಯಕ ಹಾಗೂ ಸಂಸದ ರಾಜಾ ಅಮರೇಶ್ವರ ನಾಯಕ ಅವರು ತಮ್ಮ‌ ಭಾಷಣದಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ಅಮಿತ್ ಶಾ‌ ಅವರು ಭಾಷಣದಲ್ಲಿ ಎಲ್ಲಿಯೂ ಏಮ್ಸ್ ಹೆಸತು ಉಲ್ಲೇಖಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.