ADVERTISEMENT

ರಾಯಚೂರು: ದೇಹ ದಾನಕ್ಕೆ ಪ್ರೇರಣೆ ನೀಡಿದ ವೃದ್ಧ ದಂಪತಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 14:21 IST
Last Updated 13 ಸೆಪ್ಟೆಂಬರ್ 2024, 14:21 IST
ಕೆ.ಸಿದ್ದಯ್ಯ ಮಾನವಿ, ಕೆ.ಪಾರ್ವತಿ
ಕೆ.ಸಿದ್ದಯ್ಯ ಮಾನವಿ, ಕೆ.ಪಾರ್ವತಿ   

ರಾಯಚೂರು: ಮಾನ್ವಿಯ 81 ವರ್ಷದ ಕೆ.ಸಿದ್ದಯ್ಯ ಮಾನವಿ ಹಾಗೂ 75 ವರ್ಷದ ಅವರ ಪತ್ನಿ ಕೆ.ಪಾರ್ವತಿ ದಂಪತಿ ತಮ್ಮ ಮರಣದ ನಂತರ ದೇಹಗಳನ್ನು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸ್ವಯಂ ಪ್ರೇರಿತವಾಗಿ ದೇಹದಾನ ಮಾಡಲು ಒಪ್ಪಿಗೆ ಕೊಟ್ಟಿದ್ದಾರೆ ಎಂದು ರಿಮ್ಸ್ ಆಸ್ಪತ್ರೆಯ ನಿರ್ದೇಶಕ ತಿಳಿಸಿದ್ದಾರೆ.

‘ತಮ್ಮ ದೇಹಗಳನ್ನು ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗೆ ದಾನ ಮಾಡಲು ಸ್ವಯಂ ಪ್ರೇರಿತವಾಗಿ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಒಪ್ಪಿಗೆ ಪತ್ರಗಳಿಗೆ ಸಹಿ ಮಾಡಿದ್ದಾರೆ. ವೈದ್ಯಕೀಯ ಶಿಕ್ಷಣಕ್ಕಾಗಿ ದಾನ ಮಾಡುವುದು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತ ಎಂದು ಅವರು ನಂಬಿದ್ದಾರೆ. ಅವರ ನಿರ್ಧಾರ ರಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಪ್ರಾಯೋಗಿಕ ಅನುಭವವನ್ನು ಒದಗಿಸುವಲ್ಲಿ ಮಹತ್ತರ ಪಾತ್ರ ವಹಿದಲಿದೆ. ದೇಹದಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜತೆ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಂಗ ರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT