ADVERTISEMENT

ರಾಯಚೂರು: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 4:44 IST
Last Updated 22 ಆಗಸ್ಟ್ 2025, 4:44 IST
ರಾಯಚೂರಿನ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಗುರುವಾರ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು 
ರಾಯಚೂರಿನ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಗುರುವಾರ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು    

ರಾಯಚೂರು: ದೇಶದಲ್ಲಿ ಮಾನವ ಅಭಿವೃದ್ಧಿ ಸೂಚ್ಯಾಂಕಕ್ಕಿರುವ ಏಕೈಕ ಯೋಜನೆ ಐಸಿಡಿಎಸ್ ಮಾತ್ರ. ಈ ಯೋಜನೆಯನ್ನು ಸರಳೀಕರಿಸಬೇಕು. ಮುಖಚರ್ಯೆ ಗುರುತಿಸುವ ಕ್ರಮವನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತೆಯರು ಇಲ್ಲಿಯ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಐಸಿಡಿಎಸ್ ಯೋಜನೆಯಡಿ ಯಾವುದೇ ಸೌಲಭ್ಯಗಳನ್ನು ಕೊಡದೇ ಮುಖಚರ್ಯೆ ಗುರ್ತಿಸುವ ಕ್ರಮ ಅಳವಡಿಸಿದ್ದರಿಂದ ಕ್ಷೇತ್ರಮಟ್ಟದಲ್ಲಿ ಹಲವಾರು ತೊಂದರೆಗಳನ್ನು ಅನುಭವಿಸುವಂತಾಗಿದೆ ಎಂದು ಕಾರ್ಯಕರ್ತರು ದೂರಿದರು.

ಆಧಾರ ಕಾರ್ಡ್ ಇಲ್ಲ ಎನ್ನುವ ನೆಪದಲ್ಲಿ ರಿಯಾಯಿತಿ ಹಾಗೂ ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳಿಗೆ ವಂಚನೆಯಾಗಬಾರದು. ಈ ಆಶಯಗಳನ್ನು ಸಂರಕ್ಷಣೆ ಮಾಡಬೇಕಾದ ಸರ್ಕಾರಗಳು ಇಂದು ಗುರುತು ಕಡ್ಡಾಯಗೊಳಿಸುವ ಮುಖಾಂತರ ಫಲಾನುಭವಿಗಳ ಹಕ್ಕನ್ನು ನಿರಾಕರಿಸುತ್ತಿವೆ ಎಂದು ಹೇಳಿದರು.

ADVERTISEMENT

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ, ಖಜಾಂಚಿ ವಿ.ಗಂಗಮ್ಮ, ಕಾರ್ಯದರ್ಶಿ ನರ್ಮದಾ ಪ್ರತಿಭಟನಾಕಾರರ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.