ರಾಯಚೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
ಜಿಲ್ಲೆಗೆ ಒಟ್ಟು ಪರಿಶಿಷ್ಟ ಜಾತಿ ವರ್ಗದವರಿಗೆ 16, ಪರಿಶಿಷ್ಟ ಪಂಗಡ ವರ್ಗದ 6ಮತ್ತು ಸಾಮಾನ್ಯ ವರ್ಗದವರಿಗೆ 65ಒಟ್ಟು 87 ಮಹಿಳಿಯರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.