ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು.
ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಸಂತೋಷಕುಮಾರ ರೇವೂರ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ‘ನಾಗರಿಕರಲ್ಲಿ ಸಮಗ್ರತೆ ಹಾಗೂ ಸಹೋದರತ್ವ ಮನೋಭಾವನೆ ಬೆಳೆಸುವ ಅವಶ್ಯಕತೆ ಇದೆ’ ಎಂದು ಹೇಳಿದರು.
1991ರ ಮೇ 21ರಂದು ಪ್ರಧಾನಿ ರಾಜೀವ್ ಗಾಂಧಿ ಭಯೋತ್ಪಾದನೆಗೆ ಬಲಿಯಾಗಿದ್ದರು. ಅದರ ಸ್ಮರಣಾರ್ಥವಾಗಿ ಇಂದು ದೇಶದೆಲ್ಲೆಡೆ ಭಯೋತ್ಪಾದನೆ ವಿರೋಧಿ ದಿನ ಆಚರಿಸಲಾಗುತ್ತದೆ’ ಎಂದರು.
ಪ್ರಾಚಾರ್ಯ ಸುಗುಣಾ ಬಸವರಾಜ ಮಾತನಾಡಿದರು. ಕಾಲೇಜಿನ ಉಪನ್ಯಾಸಕರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.