
ಪ್ರಾತಿನಿಧಿಕ ಪತ್ರ
ರಾಯಚೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರು, ನಾಗರಿಕ ಸೇವೆಗಳಾದ ಐಎಎಸ್ ಅಥವಾ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಭಾರತದ ಹಾಗೂ ಕರ್ನಾಟಕದ ಆಡಳಿತಾತ್ಮಕ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಸಲುವಾಗಿ ಚಾಣಕ್ಯ ಆಡಳಿತ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ಅರ್ಹ ಫಲಾನುಭವಿಗಳು ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ವೆಬ್‌ಸೈಟ್: www.ksbdb.karnataka.gov.in ಲಿಂಕ್ ಮೂಲಕ ಡಿಸೆಂಬರ್ 15ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಪಡೆಯುವ ಸಂಬಂಧ 2025-26ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ₹1 ಲಕ್ಷಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 9986332736 ಸಂಖ್ಯೆಗೆ ಬೆಳಿಗ್ಗೆ 10ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯ ಮಿಷನ್‌ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು. ಹುಡೇದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.