ದೇವದುರ್ಗ: ‘2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ
ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತ್ರಾಯ ಶಾಖೆ ಹೇಮನೂರು ತಿಳಿಸಿದ್ದಾರೆ.
‘ಪ್ರತಿ ವರ್ಷ ಸಂಘದಿಂದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಪೋಷಕರು ಕಾಯಂ ನೌಕರರಾಗಿರಬೇಕು ಹಾಗೂ ಸಂಘದ ಸದಸ್ಯರಾಗಿರಬೇಕು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ’ ಎಂದು ಹೇಳಿದ್ದಾರೆ.
https://ksgeanews.blpgsppt.cpm ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9902135813, ದೂ.ಸಂ: 080-22354783/84 ಸಂಪರ್ಕಿಸಬಹುದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.