
ಪ್ರಜಾವಾಣಿ ವಾರ್ತೆ
ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸುಶಮೀಂದ್ರ ತೀರ್ಥರ ಆರಾಧನಾ ಮಹೋತ್ಸವದ ಪ್ರಯುಕ್ತ ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿಗಳು ತಂದಿದ್ದ ಶ್ರೀವಾರಿ ವಸ್ತ್ರವನ್ನು ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.
ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಶ್ರೀವಾರಿ ವಸ್ತ್ರವನ್ನು ತಂದಿದ್ದ ಅಧಿಕಾರಿಗಳನ್ನು ಬರಮಾಡಿಕೊಂಡರು. ನಂತರ ಸುಶಮೀಂದ್ರ ತೀರ್ಥರ ಮೂಲ ಬೃಂದಾವನಕ್ಕೆ ಅರ್ಪಿಸಿದರು.
ಬೆಳಿಗ್ಗೆ ವಿಜೃಂಭಣೆಯಿಂದ ರಥೋತ್ಸವ, ಮಹಾ ಪಂಚಾಮೃತಾಭಿಷೇಕ ನಡೆಯಿತು. ಉಂಜಾಳ ಮಂಟಪದಲ್ಲಿ ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ಪಂಡಿತರಿಂದ ಜ್ಞಾನೋದಯ ಪ್ರವಚನಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.