
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಜಾಲಹಳ್ಳಿ: ಅರಕೇರ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತೆಯನ್ನು ಅಪಹರಣ ಮಾಡಲಾಗಿದೆ ಎಂದು ಬಾಲಕಿಯ ತಾಯಿ ಲಕ್ಷ್ಮಿ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅದೇ ಗ್ರಾಮದ ಆರೋಪಿ ಹನುಮಂತ ಮಲ್ಲೇಶ ಕಡ್ಲಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಾಲಕಿಯನ್ನು ಜ.3 ರಂದು ಆರೋಪಿ ಅಪಹರಣ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಪಿಎಸ್‌ಐ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.