ಸಿರವಾರ: ಪಟ್ಟಣದ ಮಹಾತ್ಮ ಗಾಂಧಿ ಕಾಲೊನಿಯ ಅಂಬಾ ಭವಾನಿ ದೇವಸ್ಥಾನದಲ್ಲಿ ಆಷಾಡದ ಕೊನೆಯ ಶುಕ್ರವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
ಭಾವಸಾರ ಕ್ಷತ್ರೀಯ ಸಮಾಜ ಮಂಡಳಿ ಮತ್ತು ದೇವಸ್ಥಾನದ ಸದ್ಭಕ್ತ ಮಂಡಳಿ ಸಹಯೋಗದಲ್ಲಿ ದೇವಸ್ಥಾನದಲ್ಲಿ ದೇವಿ ಮೂರ್ತಿಗೆ ಎಲೆ ಪೂಜೆ, ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆ ಕಾರ್ಯಗಳು ನಡೆದವು.
ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಪಟ್ಟಣದ ವಿವಿಧ ಸಮಾಜದ ಮಹಿಳೆಯರು, ಮುಖಂಡರು, ಮಕ್ಕಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.