ADVERTISEMENT

ರಾಯಚೂರು: ಗ್ರಾ.ಪಂ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 6:56 IST
Last Updated 27 ಫೆಬ್ರುವರಿ 2026, 6:56 IST
ಸಿರವಾರ ತಾಲ್ಲೂಕು ಪಂಚಾಯಿತಿ ನೊಡಲ್ ಅಧಿಕಾರಿ ಅನಿಲಕುಮಾರ ಅವರಿಗೆ  ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ಸಿರವಾರ ತಾಲ್ಲೂಕು ಪಂಚಾಯಿತಿ ನೊಡಲ್ ಅಧಿಕಾರಿ ಅನಿಲಕುಮಾರ ಅವರಿಗೆ  ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ಸಿರವಾರ: ‘ಆಶ್ರಯ ಮನೆ ವಿತರಣೆಯಲ್ಲಿ ಅಕ್ರಮವೆಸಗಿರುವ ಗ್ರಾ.ಪಂ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ತನಿಖೆ ನಡೆಸಿ ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ನೊಡಲ್ ಅಧಿಕಾರಿ ಅನಿಲಕುಮಾರ ಅವರಿಗೆ ಮನವಿ ಸಲ್ಲಿಸಿದರು. 

ತಾ.ಪಂ.ಇಒ ಅವರಿಗೆ ಬರೆದ ಮನವಿ ಪತ್ರದಲ್ಲಿ, ‘ಹೀರಾ, ಮಲ್ಲಟ, ಬಲ್ಲಟಗಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಎಂಎವೈ ಅಡಿಯಲ್ಲಿ ಮಂಜೂರಾಗಿರುವ ಆಶ್ರಯ ಮನೆಗಳ ಹಣವನ್ನು ಅನಾಮಧೇಯ ವ್ಯಕ್ತಿಗಳ‌ ಖಾತೆಗೆ ಜಮಾ ಮಾಡಿ ಅಕ್ರಮ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅಕ್ರಮದಲ್ಲಿ ಪಾಲ್ಗೊಂಡ ಗ್ರಾ.ಪಂ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ದ ಕ್ರಮಕೈಗೊಂಡು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವಂತೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ರಾಘವೇಂದ್ರ, ವೆಂಕಟೇಶ ಸಂಕ್ರಿ ಸೇರಿದಂತೆ ಆಶ್ರಯ ಮನೆಗಳ ಫಲಾನುಭವಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.