ರಾಯಚೂರು: ನಗರದ ಕೃಷ್ಣಾ ಮೆಡೋಸ್ ಬಡಾವಣೆಯಲ್ಲಿರುವ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಬೀಗ ಮುರಿದ ಒಳಗೆ ನುಗ್ಗಿ ಕಪಾಟಿನಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಶಾಸಕರ ಸಂಬಂಧಿ ಅನಿಲ ಪಾಟೀಲ ನಗರದ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.