ADVERTISEMENT

ರಾಯಚೂರು: ಬಾಲ್ಯ ವಿವಾಹ ತಡೆದ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 16:03 IST
Last Updated 18 ಫೆಬ್ರುವರಿ 2024, 16:03 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ರಾಯಚೂರು: ನಗರದ ಮೈಲಾರ ನಗರ ಬಡಾವಣೆಯಲ್ಲಿ ಪೋಷಕರು ಬಾಲಕಿಯ ಮದುವೆ ಮಾಡಲು ಮುಂದಾಗಿದ್ದ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಶನಿವಾರ ಬಾಲ್ಯ ವಿವಾಹ ತಡೆದಿದ್ದಾರೆ. 

ಬಾಲ್ಯ ವಿವಾಹ ಮಾಡಲು ಪೋಷಕರು ಶನಿವಾರ ರಾತ್ರಿ ಸಕಲ ತಯಾರಿ ನಡೆಸಿದ್ದರು. ಈ ಬಗ್ಗೆ ಸ್ಥಳೀಯರು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಂ.ಎನ್‌.ಚೇತನ್‌ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ಮದುವೆ ಮನೆಗೆ ತೆರಳಿದೆ. ಈ ವೇಳೆ, ಪಾಲಕರು ಹಾಗೂ ಸಂಬಂಧಿಕರು ಅಧಿಕಾರಿಗಳ ವಿರುದ್ಧ ಕೂಗಾಡಿ ಆಕ್ಷೇಪ ವ್ಯಕ್ತಪಡಿಸಿದರು.

ADVERTISEMENT

ಕೊನೆಗೆ ಪೊಲೀಸ್‌ ನೆರವಿನೊಂದಿಗೆ ‘ಬಾಲ್ಯ ವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ‌’ ಎಂದು ಪಾಲಕರ ಹಾಗೂ ಸಂಬಂಧಿಕರ ಮನವೊಲಿಸಿ ಬಾಲ್ಯ ವಿವಾಹ ತಡೆದರು. ನಂತರ ಅಪ್ರಾಪ್ತ ಬಾಲಕಿಯನ್ನು ಸಂರಕ್ಷಿಸಿ ಬಾಲಕಿಯರ ಬಾಲ ಮಂದಿರಕ್ಕೆ ಕಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.